LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ; ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ

Advertisement
Advertisement
ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.

ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರುಪಾಯಿ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ