LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ   

Advertisement
Advertisement
ಬಾಗಲಕೋಟೆ:  ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಮಂಜುನಾಥ್ ಹಳ್ಳೂರ್ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರ ದೃಷ್ಟಿಯಿಂದ ಮೂಡಿಬಂದ ಸಂವಿಧಾನದ ಆಶಯಗಳಾದ ಸಮಾನತೆ, ಭ್ರಾತೃತ್ವ,  ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ,  ಜಾತಿ ಮತ್ತು ಧರ್ಮದ ಆಚೆಗೆ ಕಾಣುವ ವ್ಯಕ್ತಿಗಳಲ್ಲಿ ಅಗ್ರಗಣ್ಯ ನಾಯಕರಾಗಿ ಮಹಾನ್ ಮಾನವತವಾದಿ ಅಂಬೇಡ್ಕರ್ ಕಾಣಿಸಿಕೊಂಡಿದ್ದಾರೆ ಎಂದರು.

ಪ್ರಾಚಾರ್ಯರಾದ ಶ್ರೀ. ಎಸ್. ಆರ್. ದೇಶಪಾಂಡೆ ಮಾತನಾಡಿ ಡಾ.  ಬಿ ಆರ್. ಅಂಬೇಡ್ಕರ್ ಒಬ್ಬ ನಿಷ್ಠುರ ವ್ಯಕ್ತಿ ಆಗಿದ್ದರು, ಅವರ ಆದರ್ಶ ವಿಚಾರಗಳನ್ನು  ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುವುದು ಎಂದರು.

ಈ ವೇಳೆ ಪದವಿ ಪೂರ್ವ ಪ್ರಾಚಾರ್ಯರಾದ ಡಾ. ಎನ್. ಹೆಚ್. ಬೇವಿನಹಳ್ಳಿ, , ಡಾ. ಡಿ. ಎಸ್. ಲಮಾಣಿ, ಶಿವಾನಂದ ಶಿವನಗುತ್ತಿ, ಎಸ್. ಕೆ. ಜಾಹಾಗಿರದಾರ ಹಾಗೂ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.  ಉಪನ್ಯಾಸಕರಾದ ಪಲ್ಲವಿ ಬಿ. ನಿರೂಪಿಸಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಶಿವಾನಂದ ಶಿವನಗುತ್ತಿ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು.  ಉಪನ್ಯಾಸಕಿಯಾದ ಸೌಮ್ಯ ಸಾಲಿಮಠ ಪ್ರಾರ್ಥಿಸಿದರು, ಹಿಂದಿ ವಿಭಾಗದ ಮುಖ್ಯಸ್ಥರಾದ ಎಸ್. ಕೆ. ಜಹಗೀರದಾರ ವಂದಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್‌ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ʻಮೂರ್ಖʼ ಹೇಳಿಕೆಗೆ ರಿಜಿಜು ತೀವ್ರ ಆಕ್ಷೇಪ – ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ