LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರಕ್ಕೆ ಫಡ್ನವಿಸ್‌ ಸಿಎಂ, ಪವಾರ್‌ ಡಿಸಿಎಂ – ಇಂದೇ ಅಧಿಕೃತ ಪ್ರಕಟ ಸಾಧ್ಯತೆ

Advertisement
Advertisement
ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್‌  ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌  ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್‌ ಶಿಂಧೆ ಅವರು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಧಾನಿ ಮೋದಿ, ಅಮಿತ್‌ ಶಾ ನೇತೃತ್ವದಲ್ಲಿ ಇಂದೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಗುರುವಾರ ರಾತ್ರಿ ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆಯಿತು. ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ (Eknath Shinde), ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಗೂ ಮುನ್ನ ಏಕನಾಥ್‌ ಶಿಂಧೆ ಅವರು ಕೃಷ್ಣ ಮೆನನ್ ಮಾರ್ಗದಲ್ಲಿರುವ ನಿವಾಸದಲ್ಲಿ ಅಮಿತ್‌ ಶಾ (Amit Shah) ಅವರನ್ನ ಭೇಟಿಯಾದರು. ನಂತರ ಫಡ್ನವಿಸ್‌, ಅಜಿತ್‌ ಪವಾರ್‌ ಚರ್ಚೆಯಲ್ಲಿ ಪಾಲ್ಗೊಂಡರು. ಮುಂಬೈನಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ