LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ ಆಗಬೇಕು ಅಂತಾ ಆಸೆ ಇರುತ್ತೆ: ಸತೀಶ್‌ ಜಾರಕಿಹೊಳಿ

Advertisement
Advertisement
ಬೆಂಗಳೂರು: ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ (Chief Minister) ಆಗಬೇಕು ಅಂತಾ ಆಸೆ ಇರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಸಚಿವ, ಅಮೇಲೆ ಡಿಸಿಎಂ, ಬಳಿಕ ಸಿಎಂ, ಅನಂತರ ಕೇಂದ್ರ ಸಚಿವರಾಗಬೇಕು ಅಂತಾ ಆಸೆ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ರೇಸ್ ಸನ್ನಿವೇಶ ಇಲ್ಲ. ಮುಡಾ (MUDA) ತನಿಖೆ ಆಗಬೇಕು, ಈಗ ರಾಜೀನಾಮೆ ಪ್ರಶ್ನೆ ಇಲ್ಲ ಎಂದರು.

ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಅಲ್ಲ. ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಸಿದ್ದರಾಮಯ್ಯ (Siddaramaiah) ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ಪಕ್ಷದಲ್ಲಿ ಯಾವ ಮುಸುಕಿನ ಗುದ್ದಾಟವೂ ಇಲ್ಲ.  ಸರ್ಕಾರ ಆರಂಭಗೊಂಡ ದಿನದಿಂದ ಬಿಜೆಪಿಯವರು ಸರ್ಕಾರ ಬೀಳುತ್ತದೆ ಎನ್ನುತ್ತಿದ್ದಾರೆ. ಇದೆಲ್ಲ ರಾಜಕೀಯದಲ್ಲಿ ಸ್ವಾಭಾವಿಕ ಎಂದು ಹೇಳಿದರು.

ರಹಸ್ಯ ಸಭೆಗಳ ಬಗ್ಗೆ ಹೈಕಮಾಂಡ್‌ಗೆ ವರದಿ ರವಾನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಪರವಾಗಿ ನಾವು ನಿಂತಿದ್ದೇವೆ. ಪಕ್ಷಕ್ಕೆ ಪ್ರತಿ ದಿನ 12 ಗಂಟೆ ಸಮಯ ನೀಡುತ್ತಿದ್ದೇವೆ. ಕೆಲವರು ತೆರೆಮರೆಯಲ್ಲಿ ಪಕ್ಷಕ್ಕೆ ದುಡಿಯುತ್ತಿರುತ್ತಾರೆ. ಕೆಲವರು ಹೈಲೈಟ್ ಆಗುತ್ತಾರೆ, ಕೆಲವರು ಹೈಲೈಟ್ ಆಗೋದಿಲ್ಲ. ವಿಮಾನನಿಲ್ದಾಣ ರಸ್ತೆಯಲ್ಲಿ ಪೋಸ್ಟರ್‌ ಬ್ಯಾನರ್‌ ಹಾಕಿಕೊಳ್ಳುವವರು ಹೈಲೈಟ್‌ ಆಗುತ್ತಾರೆ. ಹಳ್ಳಿಯಲ್ಲಿ ಸ್ವಂತ ದುಡ್ಡಿನಿಂದ ಪಕ್ಷ ಕಟ್ಟುವವರು ಗೊತ್ತೇ ಆಗುವುದಿಲ್ಲ. ನಾವೆಲ್ಲ ಸಭೆ ಸೇರಿದ ಕಾರಣಕ್ಕೆ ಹೆದರಬೇಕಾಗಿಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತದೆ ಎಂದು ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ